ಗಣೇಶ ಮೊಗವೀರ ರವರಿಗೆ ರಾಷ್ಟ್ರೀಯ ಮಟ್ಟದ ಡಾ.| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿ ಪ್ರದಾನ.
Monday, July 28, 2025
COSTALNEWS ದಾಮೋದರ ಮೊಗವೀರ ಸಾರಥ್ಯದಲ್ಲಿ
ಕುಂದಾಪುರ: ತಾಲೂಕಿನಹೆಮ್ಮಾಡಿ
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗಣೇಶ ಮೊಗವೀರರವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಜುಲೈ 25 ರಂದು
ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ ವೈಭವದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇವರ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.