ತ್ರಾಸಿ ಯಲ್ಲಿ ನಡೆದ ಉಚಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ರಕ್ತದಾನಿ: ಮಂಜುನಾಥ್ ಸಾಲ್ಯಾನ್
Sunday, August 31, 2025
ಕುಂದಾಪುರ: ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಅಣ್ಣಪ್ಪಯ್ಯ ಸಭಾಭವನದಲ್ಲಿ ಆದಿತ್ಯವಾರ ನಡೆದ ಉಚಿತ ರಕ್ತದಾನ ಶಿಬಿರದಲ್ಲಿ ರಕ್ತದಾನಿ ಮಂಜುನಾಥ್ ಸಾಲ್ಯಾನ್ ತ್ರಾಸಿ ಉದ್ಯಮಿ ಯವರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ
ಆದಿತ್ಯವಾರ ಲಯನ್ಸ್ ಕ್ಲಬ್ ಗಂಗೊಳ್ಳಿ - ತ್ರಾಸಿ, ರಿಕ್ಷಾ ಚಾಲಕರ ಮಾಲಕರ ಸಂಘ (ರಿ) ತ್ರಾಸಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಸಹಕಾರದಲ್ಲಿ ನೂರಾರು ಜನರು ಸ್ವಯಂ ಪ್ರೇರಿತರಾಗಿ ಬಂದು ಉಚಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೊಳಿಸಿದರು
ಅದರಂತೆ ಕಳೆದ ಹತ್ತು ಹದಿನೈದು ವರ್ಷಗಳಿಂದ ನಿರಂತರ ಸಂಘ ಸಂಸ್ಥೆಗಳು ಆಯೋಜಿಸಿದ ಉಚಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಂಜುನಾಥ್ ಸಾಲ್ಯಾನ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ ಎನ್ನಲಾಗುತ್ತಿದೆ
ಇವರ ಈ ಮಾನವೀಯತೆ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ