ಕುಂದಾಪುರ; ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಾಗದಲ್ಲಿ 79ನೇ ಸ್ವಾತಂತ್ರೋತ್ಸವದ ಸಂಭ್ರಮ
Friday, August 15, 2025
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯ ಶಾಲೆ , ಅಂಗನವಾಡಿ ಕೇಂದ್ರ, ರಿಕ್ಷಾ ಸ್ಟ್ಯಾಂಡ್ , ಹಾಗೂ ಸಂಘ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ SDMC ಅಧ್ಯಕ್ಷೆ ಶ್ರೀಮತಿ ರೇಖಾ ಗಣೇಶ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಸಮೂಹ ಸಂಪನ್ಮೂಲ ವ್ಯಕ್ತಿ,ಊರಿನ ಶಿಕ್ಷಣ ಅಭಿಮಾನಿಗಳು,ಹಳೆ ವಿದ್ಯಾರ್ಥಿಗಳು,ಹಾಗೂ ಹೊಸಾಡು ಗ್ರಾಮದ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದು ತ್ರಿವರ್ಣ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು.!
ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸರ್ಕಲ್ ಬಳಿ ಇರುವ!ಶಂಕರ್ ನಾಗ್ ರಿಕ್ಷಾ ಸ್ಟ್ಯಾಂಡ್ ಮುಳ್ಳಿಕಟ್ಟೆ ಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಧ್ವಜಾರೋಹಣ ನೆರವೇರಿಸಲಾಯಿತು,
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅರಾಟೆ (ದೇವಸ್ಥಾನ ). ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ SDMC ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ G. ಕಾಂಚನ್. ಇವರು ನೆರವೇರಿಸಿದರು.
ಈ ಸಂಧರ್ಭದಲ್ಲಿ ಊರಿನ ಶಿಕ್ಷಣ ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು, ಹಾಗೂ ಹೊಸಾಡು ಗ್ರಾಮದ ಅರಾಟೆ ಭಾಗದ ಸಮಸ್ತ ಗ್ರಾಮಸ್ಥರು ಉಪಸ್ಥಿತಿತರಿದ್ದು ತ್ರಿವರ್ಣ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು.
ಒಟ್ಟಾರೆಯಾಗಿ ಹೊಸಾಡು ಗ್ರಾಮದಲ್ಲಿ 79ನೇ ಸ್ವಾತಂತ್ರ್ಯೋತ್ಸವದ
ಆಚರಣೆ ಸಂಭ್ರಮದಿಂದ ಆಚರಿಸಲಾಯಿತು,