ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Bengaluru : ನಟಿ ರಮ್ಯಾಗೆ ಆಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣ : ಇಬ್ಬರ ಬಂಧನ…!!

Bengaluru : ನಟಿ ರಮ್ಯಾಗೆ ಆಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣ : ಇಬ್ಬರ ಬಂಧನ…!!

ಬೆಂಗಳೂರು : ಕನ್ನಡ ಚಿತ್ರರಂಗದ ಸ್ಟಾರ್ ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಅವರೆಲ್ಲರು ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ಹೋಗಿ 43 ಅಕೌಂಟ್ಗಳ ವಿರುದ್ಧ ದೂರು ದಾಖಲು ಮಾಡಿದ್ದರು. ಆ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿದ್ದರು. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಅಶ್ಲೀಲವಾಗಿ ಕಮೆಂಟ್ಗಳನ್ನು ಮಾಡಿದ್ದರು. ಹೀಗಾಗಿ ರಮ್ಯಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು.

ಇದೀಗ ಸಿಸಿಬಿ ಸೈಬರ್ ಪೊಲೀಸರು ಐಪಿ ಅಡ್ರೆಸ್ ಆಧರಿಸಿ ಇಬ್ಬರು ಇಬ್ಬರನ್ನು ಬಂಧಿಸಿದ್ದಾರೆ. ಓರ್ವ ಬಳ್ಳಾರಿ ಮೂಲದವನಾಗಿದ್ದು, ಮತ್ತೊಬ್ಬ ಚಿತ್ರದುರ್ಗ ಮೂಲದವನಾಗಿದ್ದಾನೆ. ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article