ಗಂಗೊಳ್ಳಿ: ಹೃದಯ ಸಂಬಂಧಿ ಕಾಯಿಲೆ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಗುಜ್ಜಾಡಿ ಗ್ರಾಮದ ರತ್ನಾ(55) ಎಂಬುವರು ಹಳೇ ಮನೆಯ ಕೋಣೆಯಲ್ಲಿ ಫ್ಯಾನ್ ಗೆ ಸೀರೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು.31ರಂದು ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಗ್ಗೆ ನೋಡುವಾಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.