ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ರಸ್ತೆ ಬದಿ ಒತ್ತುವರಿ ತೆರವಿಗೆ PDO ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ!!
Sunday, September 7, 2025
ಬೆಂಗಳೂರು: ಕರ್ನಾಟಕದಲ್ಲಿ ರಸ್ತೆ ಬದಿಯ ಸರಕಾರಿ ಜಮೀನುಗಳ ಒತ್ತುವರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಇವಾಗಲೇ ಸರ್ಕಾರಿ ಜಮೀನನ್ನು ಉತ್ತುವರಿ ಮಾಡಿದವರಿಗೆ ಮುಲಾಜಿಲ್ಲದೆ ಇನ್ಮುಂದೆ ರಸ್ತೆ ಬದಿಯ ಅತಿಕ್ರಮಣ ತೆರವುಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿದೆ,
.ಈ ನಿರ್ಧಾರವು ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸುತ್ತೋಲೆಯ ಮೂಲಕ ಜಾರಿಗೆ ಬಂದಿದೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ತಮ್ಮ ವ್ಯಾಪ್ತಿಯಲ್ಲಿ ಆಗಿರುವ ಸರಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವರೇ?? ಎಂಬುದು ಯಕ್ಷ ಪ್ರಶ್ನೆಯಾಗಿದೆ.