ಬೈಂದೂರು; ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ಕಾರ್ಯಕ್ರಮ
Saturday, September 20, 2025
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಪೋಷಣ ಅಭಿಯಾನ ಕಾರ್ಯಕ್ರಮದಡಿ ಪೋಷಣ ಮಾಸ ಆಚರಣೆ ಕಾರ್ಯಕ್ರಮ ಜರುಗಿತು
ಹಕ್ಲಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗರ್ಭಿಣಿಯರಿಗೆ ಸೀಮಂತ, , ಅನ್ನ ಪ್ರಾಶನ , ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ರವರು ಉದ್ಘಾಟಿಸಿ ಚಾಲನೆ ನೀಡಿದರು
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚೇತನ್ ಮೊಗವೀರ ಹಕ್ಲಾಡಿ, ಪಂಚಾಯತ್ ಸದಸ್ಯರಾದ ಚೇತನ್ ಹೆಗ್ಡೆ, ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಪ್ರಮೀಳಾ, ಅಕ್ಷತಾ ಹಾಗೂ ಸದಸ್ಯರು, ಆರೋಗ್ಯ ಕಾರ್ಯಕರ್ತೆ ಸುಜಾತ, N ಹಾಗೂ CHO ಸತೀಶ್ , ಗರ್ಭಿಣಿ ಬಾಣಂತಿಯರು, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹಾಜರಿದ್ದರು.