ಬೈಂದೂರು: ಶಿಕ್ಷಕ ಮಂಜುನಾಥ್ ನಾಯ್ಕ್ ಅವರಿಗೆ ಉಡುಪಿ ಜಿಲ್ಲೆಯ ಆದರ್ಶ ಶಿಕ್ಷಕ ಪ್ರಶಸ್ತಿ*
Saturday, September 6, 2025
ಬೈಂದೂರು: ತಾಲೂಕಿನ ಶಿರೂರು ಜ್ಞಾನದಾ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ ನಾಯ್ಕ್ ಇವರಿಗೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
ಉತ್ತಮ ಕ್ರೀಡಾಪಟು, ಕಬಡ್ಡಿ ಆಟಗಾರ ಮತ್ತು ತರಬೇತಿದಾರರಾದ ಇವರ ನಿಷ್ಠಾವಂತ ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ
ಮಂಜುನಾಥ್ ನಾಯ್ಕ್ ಅವರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೆತರವರ್ಗ ಹಾಗೂ ವಿದ್ಯಾರ್ಥಿಗಳು ಪ್ರಶಂಸಿಸಿ, ಶುಭಕೋರಿರುತ್ತಾರೆ