ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಪೋಷಣ್  ಮಾಸಾಚರಣೆ  ಪೌಷ್ಟಿಕ ಆಹಾರ, ಬಾಣಂತಿಯರಿಗೆ ಬಾಗಿನ ಕಾರ್ಯಕ್ರಮ ಸಂಭ್ರಮ

ಪೋಷಣ್ ಮಾಸಾಚರಣೆ ಪೌಷ್ಟಿಕ ಆಹಾರ, ಬಾಣಂತಿಯರಿಗೆ ಬಾಗಿನ ಕಾರ್ಯಕ್ರಮ ಸಂಭ್ರಮ

ಕುಂದಾಪುರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗುಜ್ಜಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಹಾಗೂ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು ಇವರ ಜಂಟಿ ಆಶ್ರಯದಲ್ಲಿ ಶನಿವಾರದಂದು ಗ್ರಾಮ ಮಟ್ಟದ ಪೋಷಣ್ ಮಾಸಾಚರಣೆ ಪೌಷ್ಟಿಕ ಆಹಾರ ಕಾರ್ಯಕ್ರಮ ಗುಜ್ಜಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.
ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಮ್ಮಯ್ಯ ದೇವಾಡಿಗ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ರಾಜ್ಯ ಸರ್ಕಾರದ ಆದೇಶದಂತೆ ಹಾಗೂ ಇಂದಿನ ಕಾರ್ಯಕ್ರಮದ ಮುಖ್ಯ ಅಂಗವಾದ ಗರ್ಭಿಣಿಯರಿಗೆ ಬಾಗಿನ ನೀಡುವ ಮೂಲಕ ಗರ್ಭಿಣಿಯರ ಸೀಮಂತ ಕಾರ್ಯಕ್ರಮ ಹಾಗೂ ಆರು ತಿಂಗಳು ತುಂಬಿದ ನಂತರ ಮಗುವಿನ ಬೆಳವಣಿಗೆ ನೀಡುವ ಮೊದಲ ಮೆದು ಆಹಾರವನ್ನು ಮಗುವಿಗೆ ಪರಿಚಯಿಸುವ ಮೂಲಕ ಅನ್ನಪ್ರಾಶನ ಕಾರ್ಯಕ್ರಮ ನೆರವೇರಿಸಲಾಯಿತು. ಹಾಗೂ ಇಂಥ ಕಾರ್ಯಕ್ರಮ ಪ್ರತಿ ಗ್ರಾಮ ಮಟ್ಟದಲ್ಲಿ ನಡೆದರೆ ಬಹಳಷ್ಟು ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಯಾದ ಶ್ರೀಮತಿ ಭಾಗ್ಯಲಕ್ಷ್ಮಿ ರವರು ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. 

ಮಕ್ಕಳ ತಾಯಂದಿರು, ಪೋಷಕರು, ಸಂಘದ ಸದಸ್ಯರುಗಳು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶ ಭರಿತ ತಿಂಡಿಗಳ ಪ್ರದರ್ಶನದ ನಂತರ ಪೌಷ್ಟಿಕ ಆಹಾರ ಮಾಡಿಕೊಂಡು ಬಂದ ಎಲ್ಲರಿಗೂ ಬಹುಮಾನ ನೀಡಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ರೋಟರಿ ಅಧ್ಯಕ್ಷರಾದ ಶ್ರೀಯುತ ಕೃಷ್ಣ ಪೂಜಾರಿ, ಗುಜ್ಜಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಮೇಸ್ತ, ರಾಜು ಪೂಜಾರಿ, ಲೋಲಾಕ್ಷಿ ಪಂಡಿತ್, ಭಾರತಿ, ತುಂಗಾ ಮತ್ತು ತಾಲೂಕು ಪೋಷಣ್ ಅಭಿಯಾನದ ಸಂಯೋಜಕರಾದ ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷರಾದ ಫಿಲೋಮಿನ ಫೆರ್ನಾಂಡಿಸ್, ದಲಿತ ಮುಖಂಡ ಮಂಜುನಾಥ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಹಾಗೂ ಸಂಜೀವಿನಿ ಸಂಘದ ಸದಸ್ಯರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರಾದ ಶ್ರೀಮತಿ ರೇಖಾ ಕೆ ರವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Ads on article

Advertise in articles 1

advertising articles 2

Advertise under the article