ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಬೈಂದೂರು; ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ  ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಬೈಂದೂರು; ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕನ್ನಡದ ಜ್ಯೋತಿ ಬೆಳಗುವುದರ ಮೂಲಕ ಕನ್ನಡ ಮನಸುಗಳೆಲ್ಲ ಒಂದಾಗಿ ಆಚರಿಸಲಾಯಿತು.

 ಕಾರ್ಯಕ್ರಮದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ ಶ್ರೀ ಗಣೇಶ ಮೊಗವೀರ ಅವರು ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಸಂಯೋಜಕರಾದಂತ ಸುಬ್ರಹ್ಮಣ್ಯ ಮರಾಠಿ ಇವರು ಉಪಸ್ಥಿತರಿದ್ದರು. 
ಈ ಶುಭ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ 'ಜನತಾ ಚಿತ್ರ ಸಿರಿ' ಎನ್ನುವಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಬಿಡಿಸಿದಂತಹ ಚಿತ್ರಗಳನ್ನು ಪ್ರದರ್ಶಿಸಿ, ಅತ್ಯುತ್ತಮ ಚಿತ್ರಗಳಿಗೆ ಮುಂದೆ ನಡೆಯುವಂತಹ ಜನತಾ ವ್ಯವಹಾರ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಕನ್ನಡ ನಾಡು ನುಡಿಗಳನ್ನು ಬಿಂಬಿಸುವಂತಹ ಗೀತೆಗಳಿಗೆ ದನಿಯಾದರು. ಶಿಕ್ಷಕಿ ಕುಮಾರಿ ಶ್ವೇತಾ ಅವರು ಕನ್ನಡ ನಾಡು ನುಡಿಯ ಕುರಿತಾದ ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಶಿಕ್ಷಕಿಯರಾದ ಸುಜಾತ ಅವರು ಸ್ವಾಗತಿಸಿ ಶಶಿಕಲಾ ಕಾರ್ಯಕ್ರಮವನ್ನು ನಿರೂಪಿಸಿ ಶಾಂಭವಿ ವಂದಿಸಿದರು.

Ads on article

Advertise in articles 1

advertising articles 2

Advertise under the article