ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

ಬೈಂದೂರು: NH 66 ರ ತ್ರಾಸಿ ಪ್ಲೇ ಓವರ್ ಬಳಿ  ನಿಂತಿದ್ದ ಲಾರಿಯಲ್ಲಿ ಮೃತದೇಹ ಪತ್ತೆ !

ಬೈಂದೂರು: NH 66 ರ ತ್ರಾಸಿ ಪ್ಲೇ ಓವರ್ ಬಳಿ ನಿಂತಿದ್ದ ಲಾರಿಯಲ್ಲಿ ಮೃತದೇಹ ಪತ್ತೆ !

BREAKING NEWS ಬೈಂದೂರು: ಕುಂದಾಪುರ ತಾಲೂಕಿನ ತ್ರಾಸಿ ಪ್ಲೇ ಓವರ್ ಬಳಿ ಗಂಗೊಳ್ಳಿ ಪೊಲೀಸ್ ಠಾಣೆಯ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ಸಂಜೆ ವೇಳೆ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ
ಚಲಿಸುತ್ತಿದ್ದ ಲಾರಿ ತ್ರಾಸಿ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘತದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಚಾಲಕ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ನಿಲ್ಲಿಸಿ ಮೃತಪಟ್ಟಿರುವ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎನ್ನಲಾಗುತ್ತಿದೆ, 

ಬೆಳಗಿನ ವೇಳೆ ಮೃತಪಟ್ಟ ಲಾರಿ ಚಾಲಕನನ್ನು ಯಾರು ಗಮನಿಸದೆ ಸಂಜೆಯ ವೇಳೆಯಲ್ಲಿ ಬೇರೆ ಲಾರಿ ಚಾಲಕರು ಗಮನಿಸಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ಮಾಡಿ ಪ್ರಕರಣ ದಾಖಲಾಗಿದೆ 
ಸ್ಥಳೀಯರ ಸಹಕಾರದಿಂದ ಹಾಗೂ ಆಪತ್ಬಾಂಧವ ಇಬ್ರಾಹಿಂ ಗಂಗೊಳ್ಳಿ ಯವರ ಆಂಬುಲೆನ್ಸ್ ನಲ್ಲಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ 
ನಿಷ್ಠಾವಂತ ಹಾಗೂ ಪ್ರಜ್ಞಾವಂತ ಲಾರಿ ಚಾಲಕನ ಸಮಯ ಪ್ರಜ್ಞೆ ಯಿಂದ ನಡೆಯಬಹುದಾದ ಭಾರಿ ದೊಡ್ಡ ಅನಾಹುತ ತಪ್ಪಿಸಿ ಹೃದಯಾಘತದಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ 

ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಾಗಿದೆ

Ads on article

Advertise in articles 1

advertising articles 2

Advertise under the article