ಕುಂದಾಪುರ :ಬೀದಿ ವ್ಯಾಪಾರಿಗಳನ್ನು ತೆರವು – ಮಾಡಿದ ಪುರಸಭೆ ಪೌರಾಡಳಿತ ಸಚಿವ ರಹಿಂ ಖಾನ್ ಅವರಿಂದ ಪುರಸಭೆಗೆ ವಾರ್ನಿಂಗ್!!
Saturday, November 8, 2025
ಕುಂದಾಪುರ :ಪುರಸಭೆ ವ್ಯಾಪ್ತಿಯ ಹೃದಯ ಭಾಗದಲ್ಲಿ ಜನದಟ್ಟಣೆ ಹಾಗೂ ವಾಹನ ಪಾರ್ಕಿಂಗ್ ಸಮಸ್ಯೆಯಿಂದ ಬಹಳಷ್ಟು ಸಮಸ್ಯೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಆಡಳಿತ ಅಧಿಕಾರಿಗಳು ಬೀದಿ ವ್ಯಾಪರಿಗಳ ತೆರವು – ಮಾಡಿದ ಹಿನ್ನೆಲೆಯಲ್ಲಿ ಪೌರಾಡಳಿತ ಸಚಿವ ರಹಿಂ ಖಾನ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ದಿನೇಶ ಹೆಗ್ಡೆ ಮೊಳಹಳ್ಳಿ
ಹೌದು:ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಪೌರಾಡಳಿತ ಸಚಿವ ರಹಿಂ ಖಾನ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿವರಿಸಿದರು
ಬೀದಿ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಳ್ಳದಂತೆ ಅವರಿಗೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಯವರ ಮನವಿ ಆಲಿಸಿದ ಪೌರಾಡಳಿತ ಸಚಿವ ರಹಿಂ ಖಾನ್ ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಆನಂದ ಜೆ ಇವರಿಗೆ ದೂರವಾಣಿ ಕರೆ ಮಾಡಿ ಬೀದಿ ವ್ಯಾಪಾರಿಗಳಿಗೆ ಸಮಸ್ಯೆಯನ್ನು ಅತಿ ಶೀಘ್ರದಲ್ಲಿ ಬಗೆಹರಿಸುವಂತೆ ಹಾಗೂ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವಂತೆ ಖಡಕ್ ವಾರ್ನಿಂಗ್ ಮಾಡಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ
ಒಟ್ಟಾರೆಯಾಗಿ ಇದರ ಮಧ್ಯೆ ಪುರಸಭೆ ಹೃದಯ ಭಾಗದಲ್ಲಿರುವ ಅಂಗಡಿ ಮಾಲೀಕರು ತಮ್ಮ ಅಂಗಡಿಯ ಮುಂದೆ ಅವರದ್ದೇ ಎರಡು ಮೂರು ಕಾರು ನಿಲ್ಲಿಸಿ ಗ್ರಾಹಕರಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ, ಅಂಗಡಿ ಮಾಲೀಕರ ಅವರ ವಾಹನ ಸ್ವಲ್ಪ ದೂರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡು ಬರುವಂತ ಗ್ರಾಹಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರ ಅಭಿಪ್ರಾಯವಾಗಿದೆ
ಕುಂದಾಪುರ ಪುರಸಭೆ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಆಡಳಿತ ವರ್ಗ ಮುಂದಿನ ದಿನಗಳಲ್ಲಿ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಮುಂದೆ ನಿರೀಕ್ಷಿಸಲಾಗಿದೆ!!!