Bengaluru : :ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು…!!
Monday, November 17, 2025
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅನಾರೋಗ್ಯಕ್ಕೀಡಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಶೇಷಾದ್ರಿಪುರದಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ವಾಸಕೋಶ ಸಂಬಂಧಿತ ಅನಾರೋಗ್ಯಕ್ಕೆ ಅವರು ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಶಾಸಕ ಶಿವಲಿಂಗೇಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ದಿಲ್ಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವೈದ್ಯರಿಗೆ 2 ಬಾರಿ ಕರೆ ಮಾಡಿ ಪತ್ನಿಯ ಆರೋಗ್ಯ ವಿಚಾರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ, ಡಾ.ಯತೀಂದ್ರ, ಶ್ವಾಸಕೋಶದಲ್ಲಿ ನೀರು ತುಂಬಿದೆ. ಹಾಗಾಗಿ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಇದರಿಂದ ವೈದ್ಯರು ಸಾಕಷ್ಟು ಪರೀಕ್ಷಿಸಿ ಐಸಿಯು (ತುರ್ತು ನಿಗಾ ಘಟಕ)ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ನಾಳೆವರೆಗೂ (ನ.18) ಆಸ್ಪತ್ರೆಯಲ್ಲೇ ದಾಖಲಾಗಿರಲು ವೈದ್ಯರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡ ಆಸ್ಪತ್ರೆಗೆ ಬರಲಿದ್ದಾರೆ.