karkala: ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದ ಮೇರೆಗೆ ದೈಹಿಕ ಶಿಕ್ಷಕ ನನ್ನು ಕರ್ತವ್ಯದಿಂದ ವಜಾಗೊಳಿಸಿದ: ಪ್ರಾಂಶುಪಾಲರು
Tuesday, November 18, 2025
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದ ಮೇರೆಗೆ ದೈಹಿಕ ಶಿಕ್ಷಕ ನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ಸಂಭವಿಸಿದೆ.
ಮೂಲತಃ ಕಲಬುರಗಿ ನಿವಾಸಿ, ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್. ಮಕಾಂದರ್ ವಜಾಗೊಂಡ ಶಿಕ್ಷಕ ಎಂದು ಮಾಹಿತಿ ತಿಳಿದು ಬಂದಿದೆ.
ಮಿಯ್ಯಾರಿನ ಮೊರಾರ್ಜಿ ದೇಸಾಯಿ ಶಾಲೆ ಉತ್ತಮ ಫಲಿತಾಂಶವನ್ನು ಹೊಂದಿದೆ. ಬೇರೆ ಬೇರೆ ಭಾಗಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಮಕಾಂದರ್ ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಹೇಳಿದ್ದಾರೆ.
ಈ ಕುರಿತಂತೆ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಕ್ಕಳ ದೂರಿನ ಮೇರೆಗೆ ಪೋಷಕರು, ಊರವರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಮಕಾಂದಾರ್‌ಗೆ ಈ ಬಗ್ಗೆ ಈ ಮೊದಲು ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ಇದೇ ಪ್ರವೃತ್ತಿ ಮುಂದುವರಿಸಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮಕಾಂದರ್‌ನನ್ನು ಪ್ರಾಂಶುಪಾಲರು ಶಾಲಾ ಕರ್ತವ್ಯದಿಂದ ವಜಾಗೊಳಿಸಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.