ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Kundapura :ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 'ಚಿನ್ನದ ಹುಡುಗ'

Kundapura :ರಾಜ್ಯಮಟ್ಟಕ್ಕೆ ಲಗ್ಗೆ ಇಟ್ಟ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 'ಚಿನ್ನದ ಹುಡುಗ'

ಕುಂದಾಪುರ : ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 14ರಂದು ಹೆಮ್ಮಾಡಿಯಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಒಂಬತ್ತನೆಯ ತರಗತಿಯ ವಿದ್ಯಾರ್ಥಿ ರೆಹಮತುಲ್ಲ 17 ರ ವಯೋಮಾನದ ಬಾಲಕರ 100ಮೀಟರ್ ಓಟ ಹಾಗೂ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಪಡೆದು ಹಾಸನದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿರುತ್ತಾನೆ. 

ವಿಜೇತ ವಿದ್ಯಾರ್ಥಿಯ ಸಾಧನೆಯನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಆಚಾರ್ಯ ಅವರು ಪ್ರಶಂಶಿಸಿದ್ದಾರೆ. ಹಾಗೆಯೇ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ

ವಿದ್ಯಾರ್ಥಿಯ ಸಾಧನೆಯ ಗುರಿ ಇನ್ನು ಮುಂದಿನ ದಿನದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಹೆಚ್ಚಿನ ಪ್ರಶಸ್ತಿ ಗೆದ್ದು ಬರಲಿ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ

ವರದ :  ಸುರೇಶ್ ಅಮಾಸೆಬೈಲ್  ಕೋಸ್ಟಲ್ ನ್ಯೂಸ್ ಕುಂದಾಪುರ 

Ads on article

Advertise in articles 1

advertising articles 2

Advertise under the article