ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Kundapur: ಕಾನಿಪ ಧ್ವನಿ  ಸಂಘಟನೆಯಿಂದ ಭಟ್ಕಳದಲ್ಲಿ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ–ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ತುಮಕೂರಿನಲ್ಲಿ ಪೋಸ್ಟರ್ ಬಿಡುಗಡೆ

Kundapur: ಕಾನಿಪ ಧ್ವನಿ ಸಂಘಟನೆಯಿಂದ ಭಟ್ಕಳದಲ್ಲಿ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ–ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ತುಮಕೂರಿನಲ್ಲಿ ಪೋಸ್ಟರ್ ಬಿಡುಗಡೆ

ಬೆಟ್ಕಳ- ಉತ್ತರ ಕನ್ನಡ ಜಿಲ್ಲೆತ್ಯ ಭಟ್ಕಳ ನಗರದಲ್ಲಿ ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಎಲೆರಾಂಪುರದಲ್ಲಿರುವ ಶ್ರೀ ಕುಂಚಿಟಿಗರ ಮಹಾಸಂಸ್ಥಾನ ಮಠದಲ್ಲಿ ಭಕ್ತಿಪೂರ್ಣ ವಾತಾವರಣದಲ್ಲಿ ನೆರವೇರಿತು.
ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಹನುಮಂತನಾಥ ಮಹಸ್ವಾಮಿಗಳ ಹಾಗೂ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಈ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ದೊರೆಯಿತು. ಈ ವೇಳೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಮಾನ್ಯ ಸಂತೋಷ್ ಹೆಗಡೆ ಅವರು ಕಾರ್ಯಕ್ರಮದ ಮಹತ್ವವನ್ನು ವಿವರಿಸಿ, ಪತ್ರಕರ್ತರ ಪಾತ್ರ ಸಮಾಜದಲ್ಲಿ ಅತ್ಯಂತ ಜವಾಬ್ದಾರಿಯುತವಾಗಿರಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲೂಕಿನ ಧೀಮಂತ ರಾಜಕಾರಣಿ ಹಾಗೂ ಸಮಾಜ ಸೇವಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾನ್ಯ ಪಿ.ಎನ್. ಕೃಷ್ಣಮೂರ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ, ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಟಿ.ಓ. ಹನುಮಂತರಾಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾನಿಪ ಧ್ವನಿ ವತಿಯಿಂದ ಆಯೋಜಿಸಲಾಗಿರುವ ಈ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 28 ಜನವರಿ 2026ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಶ್ರೀ ನಾಗಯಕ್ಷೇ ಧರ್ಮಾರ್ಥ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪತ್ರಕರ್ತರು, ಮಾಧ್ಯಮ ಕ್ಷೇತ್ರದ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.
ಪತ್ರಕರ್ತರ ವೃತ್ತಿಪರ ಸವಾಲುಗಳು, ಜವಾಬ್ದಾರಿಗಳು ಹಾಗೂ ಸಮಾಜದಲ್ಲಿ ಮಾಧ್ಯಮದ ಪಾತ್ರ ಕುರಿತು ಚರ್ಚೆಗಳು ನಡೆಯಲಿದ್ದು, ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಗೌರವ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article