Kundapura: ಕರ್ನಾಟಕ ರಕ್ಷಣಾ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷರಾಗಿ ರಾಜೇಶ್ ಪೂಜಾರಿ ತ್ರಾಸಿ ಆಯ್ಕೆ
Tuesday, December 23, 2025
ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ಸಂರಕ್ಷಣೆಗಾಗಿ ನಿರಂತರವಾಗಿ ಧ್ವನಿ ಎತ್ತುವ ಸಂಘಟನೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುಂಚೂಣಿಯಲ್ಲಿದೆ. ಅಂತಹ ಪ್ರಬಲ ಸಂಘಟನೆಯ ಬೈಂದೂರು ತಾಲೂಕು ಅಧ್ಯಕ್ಷರಾಗಿ ಜವಾಬ್ದಾರಿ ಹೊತ್ತಿರುವ ಶ್ರೀ ರಾಜೇಶ್ ಪೂಜಾರಿ ತ್ರಾಸಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಆ ರಾ ಪ್ರಭಾಕರ್ ಪೂಜಾರಿ ಯವರು ನೇಮಕ ಮಾಡಿ ಕರವೇ ಬೈಂದೂರು ತಾಲೂಕು ಅಧ್ಯಕ್ಷನಾಗಿ ಆಯ್ಕೆ ಮಾಡಲಾಗಿದೆ,
ಉಡುಪಿಯ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಆದಿತ್ಯವಾರ ನಡೆದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಗ್ರಹಣ ಕಾರ್ಯಕ್ರಮದಲ್ಲಿ ಜರುಗಿತು
ಈ ವೇಳೆ ಜಿಲ್ಲಾ ಮಟ್ಟದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.