Uttar Kannada :ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಂದ ಜೈಲರ್ ಸೇರಿ ನಾಲ್ವರ ಮೇಲೆ ಹಲ್ಲೆ!!
Saturday, December 6, 2025
ಕಾರವಾರ : ಇಂದು ಮಧ್ಯಾಹ್ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಸೇರಿದಂತೆ ನಾಲ್ವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮಾದಕ ವಸ್ತುಗಳಾದ ತಂಬಾಕು ಮತ್ತು ಗಾಂಜಾ ಪೂರೈಕೆಗೆ ಅವಕಾಶ ನೀಡದ ಕಾರಣಕ್ಕೆ ಆಕ್ರೋಶಗೊಂಡಿದ್ದ ಕೈದಿಗಳೇ ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಕೌಶಿಕ್ ನಿಹಾಲ್,
ಮೊಹಮ್ಮದ್ ಅಬ್ದುಲ್ ಫಯಾನ್ ಎಂಬ ಕೈದಿಗಳು ಹಲ್ಲೆ ನಡೆಸಿದವರಾಗಿದ್ದು
ಇವರ ವಿರುದ್ಧ ಡಕಾಯತಿ, ಕೊಲೆ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಮಂಗಳೂರು ಕೇಂದ್ರ ಕಾರಾಗೃಹದಿಂದ ಇತ್ತೀಚೆಗೆ ಕಾರವಾರಕ್ಕೆ ಸ್ಥಳಾಂತರಗೊಂಡಿದ್ದರೆನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಜೈಲರ್ ಕಲ್ಲಪ್ಪ ಗಸ್ತಿ ಸೇರಿ ನಾಲ್ವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರವಾರ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದು, ಕೈದಿಗಳ ವಿರುದ್ಧ ಹೊಸ ಪ್ರಕರಣ ದಾಖಲಿಸಲಾಗಿದೆ. ಜೈಲು ಆಡಳಿತದ ಕಟ್ಟುನಿಟ್ಟಿನ ನಿಯಮಗಳೇ ಘಟನೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.