Aಬಾಗಲಕೋಟೆ: ಬೀದಿನಾಯಿ ದಾಳಿಗೆ ಗಂಭೀರ ಗಾಯಗೊಂಡ 10 ವರ್ಷದ ಬಾಲಕಿ ಸಾವು
Wednesday, January 14, 2026
ಬಾಗಲಕೋಟೆ: ಬೀದಿನಾಯಿ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
10 ವರ್ಷದ ಅಲೈನಾ ಲೋಕಾಪುರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಬಾಲಕಿ. ಬಾಗಲಕೋಟೆ ಜಿಲ್ಲೆಯ ನವನಗರದ ಸೆಕ್ಟರ್ ನಂ. 15ರಲ್ಲಿ ಬಾಲಕಿ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಬಾಲಕಿಯ ಕಣ್ಣು, ಮೂಗು, ಮುಖದ ಮೇಲೆ ಗಂಭೀರ ಗಾಯಗಳಾಗಿದ್ದವು.
ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ