A ಶಿವಮೊಗ್ಗ: ನಗರದ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಠಾಣೆ ಆವರಣದಲ್ಲೇ ಆತ್ಮಹತ್ಯೆ..!
Thursday, January 8, 2026
ಮೃತರು ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಆದರೆ ರಾತ್ರಿ ಠಾಣೆಗೆ ಬಂದು ಈ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್‌ನಲ್ಲಿ ಅವರು ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನನ್ನ ಸಾವಿಗೆ ನಾಸೀರ್ ಅಹ್ಮದ್ ಹೆಡ್ ಕಾನ್ಸ್ಟೇಬಲ್ (HC 131) ಕಾರಣ" ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದರಿಂದ ಸಹೋದ್ಯೋಗಿಯಿಂದಾದ ಮಾನಸಿಕ ಕಿರುಕುಳ ಅಥವಾ ವೈಯಕ್ತಿಕ ಸಂಗತಿ ಅವರ ಸಾವಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಊಹಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರು ಠಾಣೆಗೆ ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. ಸಹೋದ್ಯೋಗಿ ನಾಸೀರ್ ಅಹ್ಮದ್ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿದೆ