Aಉಡುಪಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ...!
Sunday, January 18, 2026
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬೀಡಿನಗುಡ್ಡೆ ಎಂಬಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಬರ್ಮವ್ವ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಬೀಡಿನಗುಡ್ಡೆಯಲ್ಲಿ ಗುಡಿಸಲಿನಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.