ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

belagavi: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮ ಮದ್ಯ ಸಾಗಾಟ: ಬೆಳಗಾವಿಯಲ್ಲಿ 25 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ, ಆರೋಪಿ ಬಂಧನ

belagavi: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮ ಮದ್ಯ ಸಾಗಾಟ: ಬೆಳಗಾವಿಯಲ್ಲಿ 25 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ, ಆರೋಪಿ ಬಂಧನ

ಬೆಳಗಾವಿ: ಕಸದೊಳಗೆ ಮದ್ಯ ಮರೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಮಾಳಮಾರುತಿ ಠಾಣೆ ಪೊಲೀಸರು, ಸುಮಾರು 25 ಲಕ್ಷ ರೂ.ಗೂ ಅಧಿಕ ಮೌಲ್ಯದ 900 ಬಾಕ್ಸ್ ಮದ್ಯವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಗೋವಾದಿಂದ ಮಹಾರಾಷ್ಟ್ರಕ್ಕೆ ಕ್ಯಾಂಟರ್ ವಾಹನದಲ್ಲಿ ಮದ್ಯ ಸಾಗಿಸಲಾಗುತ್ತಿದ್ದು, ಪೊಲೀಸರ ಕಣ್ಣೆದುರು ತಪ್ಪಿಸಿಕೊಳ್ಳಲು ಕಸದೊಳಗೆ ಮದ್ಯ ಬಾಕ್ಸ್‌ಗಳನ್ನು ಅಡಗಿಸಲಾಗಿತ್ತು.
ಖಚಿತ ಮಾಹಿತಿಯ ಮೇರೆಗೆ ಸಿಪಿಐ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದಲ್ಲಿ ಶ್ರೀನಗರ ಬಳಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಇದೆ ಎನ್ನಲಾಗಿದ್ದು, ಅಕ್ರಮ ಮದ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಪಿಐ ಬಿ.ಆರ್. ಗಡ್ಡೇಕರ್ ಹಾಗೂ ಮಾಳಮಾರುತಿ ಠಾಣೆ ಪೊಲೀಸರಿಗೆ ನಗರ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.

Ads on article

Advertise in articles 1

advertising articles 2

Advertise under the article