Kundapura: ಕೋಡಿ ಅಶೋಕ್ ಪೂಜಾರಿ ಇವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ..!
Saturday, January 3, 2026
ಕುಂದಾಪುರ:
ನಾಟ್ಯ ಮಯೂರಿ ನೃತ್ಯ ಟ್ರಸ್ಟ್(ರಿ) ಕೊಡಗು ಇವರು ಆಚರಿಸಲಿರುವ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ಕೊಡಮಾಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಕೋಡಿ ಅಶೋಕ ಪೂಜಾರಿ ಆಯ್ಕೆಯಾಗಿರುತ್ತಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಆಯ್ಕೆಗೊಂಡಿದ್ದು ದಿನಾಂಕ ೧೮.೦೧.೨೦೨೬ರ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಸನ ದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿರುತ್ತಾರೆ.