Kundapura: ಬೈಕ್ ಸವಾರ ಬಸ್ ಓವರ್ ಟೆಕ್ ಮಾಡುವ ವೇಳೆ ದುರಂತ: ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ಗೆ ಮುಖಾಮುಖಿ ಢಿಕ್ಕಿ – ಬೈಕ್ ಸವಾರ ಯುವಕ ಸ್ಥಳದಲ್ಲೇ ಸಾವು
Saturday, January 24, 2026
ಕುಂದಾಪುರ: ಇತ್ತೀಚಿಗೆ ಶೆಟ್ರಕಟ್ಟೆ ಎಂಬಲ್ಲಿ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ ಟಿಪ್ಪರ್ ಹಾಗೂ ಸರಕಾರಿ ಬಸ್ ದುರಂತ ಸಂಭವಿಸಿದ ಸ್ಥಳದಲ್ಲಿ ಇನ್ನೊಂದು ದುರ್ಘಟನೆ ಸಂಭವಿಸಿದೆ ಹೌದು ಶನಿವಾರ ಬೆಳಗ್ಗೆ ಬೈಕ್ ಸವಾರ ಬಸ್ ಓವರ್‌ಟೇಕ್ ಮಾಡುವ ಅವಿವೇಕವೇ ಮತ್ತೊಂದು ಅಮೂಲ್ಯ ಜೀವವನ್ನು ಕಸಿದುಕೊಂಡ ಘಟನೆ ಕುಂದಾಪುರ ತಾಲೂಕಿನ ಶಟ್ರು ಕಟ್ಟೆ
ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಖಾಸಗಿ ಬಸ್‌ಗಳನ್ನು ಓವರ್‌ಟೇಕ್ ಮಾಡುವ ವೇಳೆ ಬೈಕ್ ಸವಾರ ಯುವಕನೊಬ್ಬ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಬಿಜಾಪುರ ಮೂಲದವನು ವಿಜಯ್ (26) ಎಂದು ಗುರುತಿಸಲಾಗಿದೆ.
ಈತ ಸೌಕೂರು ಮೂಲದ ಹೋಟೆಲ್ ಉದ್ಯಮಿ ಯವರ ಆಪ್ತನಾಗಿದ್ದಾನೆ ಹಾಗಾಗಿ ಉದ್ಯಮಿ ಸೌಕೂರು ನಲ್ಲಿರುವ ಮನೆಗೆ ಬರುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ,
ಹೌದು ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದ ವೇಳೆ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ.
ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರಿಳೆದಿದ್ದಾರೆ. ಇತ್ತೀಚೆಗಷ್ಟೇ ಟಿಪ್ಪರ್ ಮತ್ತು ಸರ್ಕಾರಿ ಬಸ್ ನಡುವೆ ಇದೇ ಶೆಟ್ರಕಟ್ಟೆ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದ ನೆನಪು ಇನ್ನೂ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಮಾಹಿತಿ ಪಡೆದ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಗಳ ಸರಣಿ ನಡೆಯುತ್ತಿರುವ ಶೆಟ್ರಕಟ್ಟೆ ತಿರುವಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಸ್ಥಳೀಯರಿಂದ ಹಾಗೂ ಪ್ರಜ್ಞಾವಂತ ನಾಗರಿಕರಿಂದ ಕೇಳಿಬರುತ್ತಿದೆ.
ತಕ್ಷಣ ಸಂಬಂಧಪಟ್ಟವರು ಇತ್ತ ಕಡೆ ಗಮನಹರಿಸಿ ಮುಂದೆ ಆಗುವ ಅನಾಹುತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆನ್ನುವುದೇ ಸಾರ್ವಜನಿಕರ ಅಭಿಪ್ರಾಯವಾಗಿದೆ.