ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Kundapura:ಕಾ.ನಿ.ಪ ಧ್ವನಿ (ರಿ)ನೇತೃತ್ವದಲ್ಲಿ ಭಟ್ಕಳದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕೀರ್ಣ ಕಾರ್ಯಕ್ರಮಕ್ಕೆ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಆಹ್ವಾನ…!!

Kundapura:ಕಾ.ನಿ.ಪ ಧ್ವನಿ (ರಿ)ನೇತೃತ್ವದಲ್ಲಿ ಭಟ್ಕಳದಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕೀರ್ಣ ಕಾರ್ಯಕ್ರಮಕ್ಕೆ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಆಹ್ವಾನ…!!

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ 11.30ರ ವೇಳೆಗೆ ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕ ಶ್ರೀ ಗೋವಿಂದ ಬಾಬು ಪೂಜಾರಿ ಅವರಿಂದ ಬಡವರಿಗಾಗಿ ನಿರ್ಮಿಸಲಾದ 18ನೇ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರಾವಳಿ ವಿಭಾಗದ ಅಧ್ಯಕ್ಷರಾದ ಕುಮಾರ ನಾಯ್ಕ ಅವರು ಶ್ರೀ ಗೋವಿಂದ ಬಾಬು ಪೂಜಾರಿ ಅವರನ್ನು ಖುದ್ದಾಗಿ ಭೇಟಿಯಾಗಿ, ಇದೇ ತಿಂಗಳ 28ರಂದು ಭಟ್ಕಳ ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿದರು.
ಆಹ್ವಾನ ಸ್ವೀಕರಿಸಿದ ಶ್ರೀ ಗೋವಿಂದ ಬಾಬು ಪೂಜಾರಿ ಅವರು ಸಮಾರಂಭಕ್ಕೆ ಖುದ್ದಾಗಿ ಹಾಜರಾಗುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧ್ಯಕ್ಷರಾದ ದಾಮೋದರ್ ಮೊಗವೀರ ನಾಯಕವಾಡಿ, ಕಾ.ನಿ.ಪ ಧ್ವನಿ ಕರಾವಳಿ ಭಾಗದ ಅಧ್ಯಕ್ಷ ಕುಮಾರ್ ನಾಯಕ್ ಭಟ್ಕಳ, ಹಾಗೂ ಕಾ.ನಿ.ಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article