ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Kundapura: ಗಂಗೊಳ್ಳಿಯಲ್ಲಿ ಮಟ್ಕಾ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಓರ್ವನ ಬಂಧನ, ನಗದು ಜಪ್ತಿ…!!

Kundapura: ಗಂಗೊಳ್ಳಿಯಲ್ಲಿ ಮಟ್ಕಾ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಓರ್ವನ ಬಂಧನ, ನಗದು ಜಪ್ತಿ…!!

ಗಂಗೊಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗಂಗೊಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಗಂಗೊಳ್ಳಿ ಗ್ರಾಮದ ರಥಬೀದಿ ಬಳಿ ನಡೆದಿದೆ.

ಬೆಳಿಗ್ಗೆ 11:00 ಗಂಟೆಯ ಸುಮಾರಿಗೆ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪವನ್ ನಾಯಕ್ ಅವರಿಗೆ ಬೀಟ್‌ ಸಿಬ್ಬಂದಿ ರಾಜು ನಾಯ್ಕ ಅವರು ಮಟ್ಕಾ ಅಕ್ರಮದ ಬಗ್ಗೆ ಖಚಿತ ಮಾಹಿತಿ ನೀಡಿದ್ದರು. ಗಂಗೊಳ್ಳಿ ರಥಬೀದಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಮಟ್ಕಾ ದಂಧೆಯಲ್ಲಿ ತೊಡಗಿದ್ದಾನೆ ಎಂಬ ಮಾಹಿತಿಯ ಮೇರೆಗೆ ಪಿಎಸ್‌ಐ ಮತ್ತು ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಓರ್ವ ವ್ಯಕ್ತಿ ಸಾರ್ವಜನಿಕರನ್ನು ಕೂಗಿ ಕರೆಯುತ್ತಾ, “ಒಂದು ರೂಪಾಯಿಗೆ 70 ರೂಪಾಯಿ ನೀಡುವುದಾಗಿ” ಆಮಿಷ ಒಡ್ಡುತ್ತಿದ್ದನು.
ಜನರಿಂದ ಹಣ ಸಂಗ್ರಹಿಸಿ ಚೀಟಿಯಲ್ಲಿ ಸಂಖ್ಯೆಗಳನ್ನು ಬರೆಯುತ್ತಿದ್ದನ್ನು ಖಚಿತಪಡಿಸಿಕೊಂಡ ಪೊಲೀಸರು, ಬೆಳಿಗ್ಗೆ 11:20 ಗಂಟೆಗೆ ಪಂಚರ ಸಮಕ್ಷಮದಲ್ಲಿ ದಾಳಿ ನಡೆಸಿದರು. ದಾಳಿಯ ವೇಳೆ ಮಟ್ಕಾ ಚೀಟಿ ಬರೆಯುತ್ತಿದ್ದ ಉದಯ ದೇವಾಡಿಗ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಉದಯ ದೇವಾಡಿಗ ಎಂಬಾತನಿಂದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಒಟ್ಟು 1,350/- ರೂಪಾಯಿ ನಗದು, ಒಂದು ಮಟ್ಕಾ ಚೀಟಿ ಹಾಗೂ ಒಂದು ಬಾಲ್ ಪೆನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಟ್ಕಾ ಅಕ್ರಮ ದಂಧೆಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ಅನುಮತಿ ಪಡೆದ ಗಂಗೊಳ್ಳಿ ಪೊಲೀಸರು, ಅಪರಾಧ ಕ್ರಮಾಂಕ 06/2026 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ (KP Act) ಕಲಂ: 78(1)(iii) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಗಂಗೊಳ್ಳಿಯಲ್ಲಿ ಮಟ್ಕಾ ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತೀಚಿನ ದಿನಗಳಲ್ಲಿ ಮಟ್ಕಾ ದಂಧೆ ಕೋರರು ಇದರಲ್ಲಿ ಹೊಸ ಮುಖಗಳು ಮಟ್ಕಾ ದಂಧೆ ನಡೆಸುತ್ತಿರುವ ಬಗ್ಗೆಯೂ ಮಾಹಿತಿ ಹಿನ್ನೆಲೆಯಲ್ಲಿ  ದಂಧೆ ಕೋರರ ವಿರುದ್ಧ ಕಾರ್ಯಚರಣೆ ಮುಂದುವರೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಸಾರ್ವಜನಿಕ ವಲಯದಲ್ಲಿ ಗುಸು ಗುಸು ಸುದ್ದಿಯಾಗುತ್ತಿದೆ 

Ads on article

Advertise in articles 1

advertising articles 2

Advertise under the article