Kundapuraಉಡುಪಿಯಲ್ಲಿ ಪೊಲೀಸ್ ಇಲಾಖೆಯ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಕಂಡ್ಲೂರು ಠಾಣೆಯ ಪಿ ಎಸ್ ಐ ನಾಸೀರ್ ಹುಸೈನ್ ಕುಸಿದು ಬಿದ್ದು ಮೃತ್ಯು
Saturday, February 28, 2026
ನಮ್ಮಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ
ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್
ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ
ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್‌ಐ ನಾಸೀರ್ ಹುಸೇನ್
ಸೇರಿದಂತೆ ನೂರಾರು ಪೊಲೀಸರು
ಪಾಲ್ಗೊಂಡಿದ್ದರು.
ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು.
ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು
ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ
ಪಟ್ಟಿರುವುದಾಗಿ ತಿಳಿಸಿದ್ದಾರೆ.
ನಾಸಿರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಪ್ರಸ್ತುತ ಕುಂದಾಪುರ ಗ್ರಾಮಾಂತರ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಒಂದುವರೆ ವರ್ಷದಲ್ಲಿ ಪೊಲೀಸ್ ಇಲಾಖೆಯಿಂದ ನಿವೃತ್ತಿ ಹೊಂದಲಿದ್ದಾರೆ ಎಂದು ತಿಳಿದು ಬಂದಿದೆ ಹಾಗೂ ಕರ್ತವ್ಯದ ವೇಳೆ ಸಾರ್ವಜನಿಕರ ಜೊತೆ ಒಳ್ಳೆಯ ಬಾಂಧವ್ಯ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ, ಒಟ್ಟಾರೆಯಾಗಿ ಅವರ ಅಕಾಲಿಕ ಸಾವಿನಿಂದ ಸಾರ್ವಜನಿಕರಿಗೆ ನೋವುಂಟು ಮಾಡಿದೆ