ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Udupi ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಉಡುಪಿ ಜಿಲ್ಲೆಗೆ ಭೇಟಿ*

Udupi ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಉಡುಪಿ ಜಿಲ್ಲೆಗೆ ಭೇಟಿ*

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪದಾಧಿಕಾರಿಗಳ ಸಭೆ ನಡೆಸಿದರು.
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ಜಿಲ್ಲೆಯ ಮುಂದಿನ ಹೋರಾಟದ ಬಗ್ಗೆ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 

ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಭಾಷಾ ಹಕ್ಕುಗಳ ಉಲ್ಲಂಘನೆ ಮತ್ತು ಕನ್ನಡ ಅಸ್ಮಿತೆಗೆ ಧಕ್ಕೆ ಎಂದು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಬಗ್ಗೆ ಜಿಲ್ಲಾ ಪದಾಧಿಕಾರಿಗಳಿಗೆ ರಾಜ್ಯಧ್ಯಕ್ಷರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿಯವರಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.

ಈ ವೇಳೆ ಕರವೇ ಉಡುಪಿ ಜಿಲ್ಲಾ ಗೌರವಧ್ಯಕ್ಷರಾದ ಅನ್ಸಾರ್ ಅಹಮದ್, ಉಪಾಧ್ಯಕ್ಷರಾದ ಸುಧೀರ್ ಪೂಜಾರಿ, ಸಯ್ಯದ್ ನಿಜಾಮ್ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ದೇವಕಿ ಬಾರ್ಕೂರು, ಉಡುಪಿ ತಾಲೂಕು ಅಧ್ಯಕ್ಷರಾದ ಸತೀಶ್ ಸನಿಲ್, ಕಾರ್ಯದರ್ಶಿ ಸಂತೋಷ್ ಕುಲಾಲ್, ಸವಿತಾ, ಬೇಬಿ, ಸುಮಂತ್, ರಮೇಶ್, ಅಮನ್ ಮೊದಲಾದವರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article