ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

bainduru : ಕೊಲ್ಲೂರು ಸಮೀಪ ವಂಡ್ಸೆ ಎಂಬಲ್ಲಿ ಹಣಕಾಸು ವಿಚಾರಕ್ಕೆ ಅಂಗಡಿಗೆ ನುಗ್ಗಿ ಇಬ್ಬರ ಮೇಲೆ ಹಲ್ಲೆ…!!

bainduru : ಕೊಲ್ಲೂರು ಸಮೀಪ ವಂಡ್ಸೆ ಎಂಬಲ್ಲಿ ಹಣಕಾಸು ವಿಚಾರಕ್ಕೆ ಅಂಗಡಿಗೆ ನುಗ್ಗಿ ಇಬ್ಬರ ಮೇಲೆ ಹಲ್ಲೆ…!!

ಬೈಂದೂರು: ತಾಲೂಕಿನ ಕೊಲ್ಲೂರು ಸಮೀಪ ವಂಡ್ಸೆ ಎಂಬಲ್ಲಿ ಹಣಕಾಸು ವಿಚಾರವನ್ನು ಕಾರಣವಾಗಿಟ್ಟುಕೊಂಡು ಅಂಗಡಿಗೆ ನುಗ್ಗಿದ ವ್ಯಕ್ತಿಯೊಬ್ಬರು ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಕುಂದಾಪುರ ತಾಲೂಕಿನ ವಂಡ್ಸೆ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.

ಮಾರ್ಚ್ 10ರಂದು ಸಂಜೆ ಸುಮಾರು 5 ಗಂಟೆಯ ವೇಳೆ, ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಶೇಷು ಶೆಟ್ಟಿ (65) ಅವರು ವಂಡ್ಸೆ ಗ್ರಾಮದ ಐತಾಳ್ ಕ್ಲಿನಿಕ್ ಸಮೀಪ ನಡೆಸುತ್ತಿರುವ ಅಡಿಕೆ ಹಾಗೂ ಕೃಷಿ ಸಂಬಂಧಿತ ವಾಣಿಜ್ಯ ಬೆಳೆ ಮಾರಾಟದ ಅಂಗಡಿಗೆ ಆರೋಪಿ ಪ್ರಕಾಶ್ ಎಂ.ಎಸ್. ಎಂಬಾತ ತನ್ನ ಕಾರಿನಲ್ಲಿ ಬಂದು ನಿಲ್ಲಿಸಿ ಅಂಗಡಿಗೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ.
ಅಲ್ಲಿ ಹಣಕಾಸಿನ ವಿಚಾರವನ್ನು ಮುಂದಿಟ್ಟುಕೊಂಡು ಅವಾಚ್ಯ ಶಬ್ದಗಳಿಂದ ಬೈದು ಶೇಷು ಶೆಟ್ಟಿಯವರ ಕೊರಳಪಟ್ಟಿ ಹಿಡಿದು ಕೆನ್ನೆಗೆ ಹೊಡೆದು, ಎದೆ ಮೇಲೆ ಗುದ್ದಿ ನೆಲಕ್ಕೆ ಕೆಡವಿ ಕಾಲಿನಿಂದ ತುಳಿದು ಅಲ್ಲಿದ್ದ ಮರದ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ವೇಳೆ ಘಟನೆಯನ್ನು ತಡೆಯಲು ಮುಂದಾದ ಸೂಲಿಯಣ್ಣ ಶೆಟ್ಟಿ ಅವರ ಮೇಲೂ ಆರೋಪಿ ಹಲ್ಲೆ ನಡೆಸಿ ಕೈಯಿಂದ ಹೊಡೆದು ನೆಲಕ್ಕೆ ದೂಡಿ ಕಾಲಿನಿಂದ ತುಳಿದಿರುವುದಾಗಿ ತಿಳಿದುಬಂದಿದೆ.

ಘಟನೆಯನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿ ಜೀವ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಶೇಷು ಶೆಟ್ಟಿ ಹಾಗೂ ಸೂಲಿಯಣ್ಣ ಶೆಟ್ಟಿ ಅವರನ್ನು ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ನೀಡಲಾದ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 15/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(4), 352, 115(2), 118(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Ads on article

Advertise in articles 1

advertising articles 2

Advertise under the article