Bengaluru ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನದ ದ್ವಿತೀಯ ಪೂರ್ವಭಾವಿ ಸಭೆ
Saturday, March 14, 2026
ದೊಡ್ಡಬಳ್ಳಾಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಸಂಘಟನೆಯ ನೆಲಮಂಗಲದಲ್ಲಿ ನಡೆಯಲಿರುವ 4ನೇ ರಾಜ್ಯ ಸಮ್ಮೇಳನದ ಎರಡನೇಯ ಪೂರ್ವಭಾವಿ ಸಭೆಯನ್ನು ದೊಡ್ಡಬಳ್ಳಾಪುರದಲ್ಲಿ ಇಂದು ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ನೇತೃತ್ವದಲ್ಲಿ ನಡೆಸಲಾಯಿತು, ಈ ಸಂದರ್ಭದಲ್ಲಿ ನೂತನ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಹೊಸಕೋಟೆಯ ಎಂ ಚೌಡೆಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು,
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೆಲಮಂಗಲದ ಮಹೇಶ್ ರವರನ್ನು ಆಯ್ಕೆ ಮಾಡಲಾಯಿತು, ಜಿಲ್ಲಾ ಗೌರವಾಧ್ಯಕ್ಷರಾಗಿ ದೊಡ್ಡಬಳ್ಳಾಪುರದ ಎಂ.ಎಲ್.ಆನಂದ್ ಕುಮಾರ್ ರವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಎಂ ದೇವರಾಜ್ ರವರು ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾದ ಜನಪರ ಮಂಜು ಅವರು, ಉಪಾಧ್ಯಕ್ಷರಾದ ಚೌಡರಾಜ್ ಹಾಗು ನಂಜುಂಡಯ್ಯನವರು ಪ್ರಧಾನ ಕಾರ್ಯದರ್ಶಿಗಳಾದ ಕೇಬಲ್ ರಾಮಚಂದ್ರ ರವರು ಸಹ ಕಾರ್ಯದರ್ಶಿಗಳಾದ ಹರಿಕುಮಾರ್ ರವರು ಜಿಲ್ಲೆಯ ನಾಲ್ಕು ತಾಲೂಕಿನ ಅಧ್ಯಕ್ಷರುಗಳು ಉಪಸ್ಥಿತರಿದ್ದ ಈ ಮಹತ್ವ ಪೂರ್ಣ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಕುರಿತಂತೆ ಅನೇಕ ವಿಚಾರಗಳನ್ನು ಆರೋಗ್ಯ ಪೂರ್ಣ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮದ ಕುರಿತು ಚರ್ಚೆ ನಡೆಸಲಾಗಿದೆ