ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

BREAKING NEWS ಬೈಂದೂರು: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್, -ಕಾರು ಡಿಕ್ಕಿ ತಾಯಿ ಮಗಳು ದಾರುಣ ಸಾವು..!

BREAKING NEWS ಬೈಂದೂರು: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್, -ಕಾರು ಡಿಕ್ಕಿ ತಾಯಿ ಮಗಳು ದಾರುಣ ಸಾವು..!

ಬೈಂದೂರು: ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಮತಾ ರಾಘು(36) ವರ್ಷ ನೆಲಮಂಗಲ ಬೆಂಗಳೂರು ಹಾಗೂ ಧೃತಿಕ 14 ವರ್ಷ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಘು ರವರ ಇನ್ನೊರ್ವ ಮಗಳು ಜಾನವಿ 12 ವರ್ಷ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ರಾಘು ರವರು ಸಹ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕಿರಣ್ ಕುಮಾರ್ 40 ವರ್ಷ ಇವರು ಮಲ್ಲೇಶ್ವರಂ ನಿವಾಸಿಯಾಗಿದ್ದು ಗಂಭೀರ ಗಾಯಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
 ಕಿರಣ್ ರವರ ಮಗಳಾದ ಚಾರ್ವಿ ಹತ್ತು ವರ್ಷ ಇವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಕಿರಣ್ ರವರ ಪತ್ನಿ ಕಾವ್ಯ ಇವರು ನನ್ನ ಪುಟ್ಟ ಗಾಯಗಳೊಂದಿಗೆ ಹೊರರೋಗಿ ಚಿಕಿತ್ಸೆ ಪಡೆದಿರುತ್ತಾರೆ.. ಕಿರಣ ಹಾಗೂ ರಾಘು ಇವರಿಬ್ಬರೂ ಬೆಂಗಳೂರಿನಲ್ಲಿ ಸರಕಾರಿ ಉದ್ಯೋಗದಲ್ಲಿದ್ದು, ರಜೆ ನಿಮಿತ್ತ ಇವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮುರುಡೇಶ್ವರ ದೇವಸ್ಥಾನಕ್ಕೆ ತೆರಳಿ ವಾಪಸ್ ಬೆಂಗಳೂರು ಕಡೆ ವಾಪಸ್ ಆಗುವಾಗ ಈ ದುರ್ಘಟನೆ ನಡೆದಿದೆ..
 ಘಟನಾಸ್ಥಳಕ್ಕೆ ಕೂಡಲೇ ಆಗಮಿಸಿದ ಗಂಗೊಳ್ಳಿ ಎಂ ಎಚ್ ಐ ತುರ್ತು ಸ್ಪಂದನ ತಂಡದ ಎರಡು ಅಂಬುಲೆನ್ಸ್ ಗಳಲ್ಲಿ ಗಾಯಾಡುಗಳನ್ನು ಹಾಗೂ ಶವಗಳನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆ ಕೊಂಡಲಾಯತು.. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ, ಬೈಂದೂರು ರತ್ನ ನಿರೀಕ್ಷಕರು, ತಾನಾಧಿಕಾರಿಗಳು, ಒನ್ ವನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್ ಸಿಬ್ಬಂದಿ ಅದೇ ರೀತಿ ಐ ಆರ್ ಬಿ ಸಿಬ್ಬಂದಿಗಳು ಭೇಟಿ ನೀಡಿದರು. ಘಟನಾ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರಲ್ಲಿ ಕೆಲವರು ಗಾಯಾಳುಗಳನ್ನು ಹಾಗೂ ಶವಸಗಾಟ ಮಾಡಲು ಸಹಕರಿಸಿದರು.. ತುರ್ತುಸ್ಪಂದನಾ ತಂಡದ ಇಬ್ರಾಹಿಂ ಗಂಗೊಳ್ಳಿ, ವಿಕಾಸ್ ಮೊಗವೀರ ಹಾಗೂ ಪ್ರಶಾಂತ ನಾಯಕವಾಡಿ ಇವರು ಗಾಯಾಳುಗಳನ್ನು ಹಾಗೂ ಶವಗಳನ್ನು ಸಾಗಿಸಲು ಸಹಕರಿಸಿದರು.
ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article