ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Udupi : ಏಣಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು- ರಜೆಯಲ್ಲಿ ಕೆಲಸ ಮಾಡಿ ಮನೆಗೆ ಆಧಾರಸ್ಥಂಭವಾಗಿದ್ದ ವಿದ್ಯಾರ್ಥಿ ..!ವಿಧಿಯೇ ನೀನೆಷ್ಟುಕ್ರೂರಿ.

Udupi : ಏಣಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿ ಸಾವು- ರಜೆಯಲ್ಲಿ ಕೆಲಸ ಮಾಡಿ ಮನೆಗೆ ಆಧಾರಸ್ಥಂಭವಾಗಿದ್ದ ವಿದ್ಯಾರ್ಥಿ ..!ವಿಧಿಯೇ ನೀನೆಷ್ಟುಕ್ರೂರಿ.

ಉಡುಪಿ : ಜಿಲ್ಲೆಯ ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದು, ನಿನ್ನೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಈತ ಕೇವಲ ವಿದ್ಯಾರ್ಥಿ ಮಾತ್ರವಲ್ಲ, ಮನೆಯ ಆಧಾರವಾಗಿದ್ದ.
ಸಾತ್ವಿಕ್ ಗೆ ಕೃಷಿಯ ಬಗ್ಗೆ ಅರಿವು ಇತ್ತು.ಮೊನ್ನೆಯಷ್ಟೆ ಪಿಯುಸಿ ಪರೀಕ್ಷೆ ಮುಗಿಸಿದ್ದ. ಮುಂದಿನ ಹಂತ ಡಿಗ್ರಿ ವಿದ್ಯಾಭ್ಯಾಸ. ಅದಕ್ಕಾಗಿ ಹಣ ಬೇಕು, ಮನೆಯವರಿಗೂ ಕೈಲಾದ ಸಹಾಯ ಮಾಡಬೇಕು ಎಂಬ ದೃಷ್ಟಿಯಿಂದ ರಜೆಯಲ್ಲಿ ಕೆಲಸಕ್ಕೆ ಹೋಗಿದ್ದ. ಕೆಲಸಕ್ಕೆ ಹೋದವನು ಮನೆಗೆ ಮರಳಿ ಬಾರದೆ ಒಂದು ದುರ್ಘಟನೆಯಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ads on article

Advertise in articles 1

advertising articles 2

Advertise under the article