ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

udupi ಕುಂದಾಪುರ: ಅವಳಿ ಸಹೋದರಿಯರು ಗಮನ ಸೆಳೆದ ಎಸ್ಎಸ್ಎಲ್ ಸಿ  ಪರೀಕ್ಷೆಯ ಅಂಕಪಟ್ಟಿ..!

udupi ಕುಂದಾಪುರ: ಅವಳಿ ಸಹೋದರಿಯರು ಗಮನ ಸೆಳೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಅಂಕಪಟ್ಟಿ..!

ಕುಂದಾಪುರ: ಅವಳಿ ಸಹೋದರಿಯರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಇಬ್ಬರೂ ಕೂಡಾ ಒಂದೇ ರೀತಿ ಅಂಕ ಪಡೆಯುವ ಮೂಲಕ ಗಮನ ಸಳೆದಿದ್ದಾರೆ. 
ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಎಸ್. ಪೂಜಾರಿ ಹಾಗೂ ಪ್ರತೀಕ್ಷಾ ಎಸ್.ಪೂಜಾರಿ ಇಬ್ಬರೂ ಕೂಡಾ 602 ( 96.36%) ಅಂಕ ಪಡೆದಿದ್ದಾರೆ. ಇವರಿಬ್ಬರೂ ಕೂಡಾ ಕಲಿಕೆಯಲ್ಲೂ ಸಾಮ್ಯಾತೆ ಹೊಂದಿದ್ದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಂದೇ ರೀತಿ ಅಂಕ ಪಡೆದಿರುವುದು ವಿಶೇಷವಾಗಿದೆ.
ಇನ್ನೊಂದು ವಿಶೇಷವೆಂದರೆ ಇವರು ಬಸ್ರೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಇಸಿ‌ಓ ಆಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಹಾಗೂ ಪ್ರೇಮಾ ಅವರ ಪುತ್ರಿಯರು. ತಂದೆ ಸರಕಾರಿ ಶಾಲೆಯ ಶಿಕ್ಷಕರಾಗಿ ತಮ್ಮ ಮಕ್ಕಳನ್ನು ಸರಕಾರಿ ಶಾಲೆಯಲ್ಲಿಯೇ ಓದಿಸಿ ಮಾದರಿಯಾಗಿದ್ದಾರೆ.
 ಸಮೀಕ್ಷಾ ಮತ್ತು ಪ್ರತೀಕ್ಷಾ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಮುಗಿಸಿದ್ದು ಬಳಿಕ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪುವಿನಲ್ಲಿ ಪ್ರೌಢಶಿಕ್ಷಣ ಮುಂದುವರಿಸಿದ್ದರು. ಈಗ ಎಸ್.ಎಸ್.ಎಲ್.ಸಿಯಲ್ಲಿ ಇಬ್ಬರೂ ಕೂಡಾ 602 ಅಂಕ ಪಡೆಯುವ ಮೂಲಕ ಶಾಲೆಗೆ ತೃತೀಯ ಸ್ಥಾನ ಪಡೆದು, ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.

Ads on article

Advertise in articles 1

advertising articles 2

Advertise under the article