ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Udupi ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ...!

Udupi ಗುರುಪುರ ಕಂಬಳಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರ ಭೇಟಿ...!

ಉಡುಪಿ : ಮಂಗಳೂರಿನ ಮುಳೂರು - ಅಡ್ಡೂರು ಜೋಡುಕರೆ ಕಂಬಳ (ಗುರುಪುರ ಕಂಬಳ)ಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು, ಶನಿವಾರ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವ ಅಭಯಚಂದ್ರ ಜೈನ್, ಗುರುಪುರ ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ,ಜಿಲ್ಲಾ ಕಂಬಳ ಸಮಿತಿ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಪ್ರಮುಖರಾದ ಜಗದೀಶ್ ಅಧಿಕಾರಿ, ಪದ್ಮನಾಭ ಕೋಟ್ಯಾನ್, ರಾಜಕುಮಾರ್ ಶೆಟ್ಟಿ ತಿರುವೈಲುಗುತ್ತು, ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ವಿನಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕಂಬಳದ ಪ್ರಯುಕ್ತ ಮಾಣಿಬೆಟ್ಟುಗುತ್ತು ವಠಾರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಸುರೇಂದ್ರ ಮಲ್ಲಿ ಮತ್ತು ತಂಡದವರಿoದ 'ಮಹಿಮೆದ ಮಂತ್ರದೇವತೆ ' ಎಂಬ ಯಕ್ಷಗಾನ ಬಯಲಾಟ ನಡೆಯಿತು.

Ads on article

Advertise in articles 1

advertising articles 2

Advertise under the article