ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Ballari: ಸರಕಾರಿ ಆಸ್ಪತ್ರೆಗೆ ತಾಯಿಯ ಚಿಕಿತ್ಸೆಗೆಂದು  ಬಂದಿದ್ದ ಅಪ್ರಾಪ್ತೆಯ ಮೇಲೆ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ:   ಡಿ-ಗ್ರೂಪ್ ನೌಕರ ಬಂಧನ

Ballari: ಸರಕಾರಿ ಆಸ್ಪತ್ರೆಗೆ ತಾಯಿಯ ಚಿಕಿತ್ಸೆಗೆಂದು ಬಂದಿದ್ದ ಅಪ್ರಾಪ್ತೆಯ ಮೇಲೆ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ: ಡಿ-ಗ್ರೂಪ್ ನೌಕರ ಬಂಧನ

ಬಳ್ಳಾರಿ: ತಾಯಿಯ ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಸರ್ಕಾರಿ ಆಸ್ಪತ್ರೆಯ ಡಿ-ಗ್ರೂಪ್ ನೌಕರನನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅಜಯ್ ಮದಕರಿ (37) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕಿಯ ತಾಯಿ ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಳು. ಈ ವೇಳೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಅಜಯ್ ಮದಕರಿ, ಬಾಲಕಿಯನ್ನು ಪುಸಲಾಯಿಸಿ ತನ್ನ ಕ್ವಾಟ್ರಸ್‌ಗೆ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಬಳಿಕ ಆಕೆಗೆ ಮತ್ತು ಬರುವ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಘಟನೆ ಬೆಳಕಿಗೆ ಬಂದ ತಕ್ಷಣ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹೊಸಪೇಟೆ ಬಡಾವಣೆ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರೆದಿದೆ

Ads on article

Advertise in articles 1

advertising articles 2

Advertise under the article