ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Bengaluru : ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ "  ಸಿಎಂ ಸಿದ್ದರಾಮಯ್ಯ

Bengaluru : ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ " ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಚಿವರಿಗಾಗಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಸಚಿವರಿಗೆ ತಿಳಿಸಿದ್ದಾರೆ. ಸಚಿವರಿಗೆ ತಮ್ಮ ವಿದಾಯದ ಸಂದೇಶವನ್ನು ತಿಳಿಸಿದ ಸಿದ್ದರಾಮಯ್ಯ ಇಂದು ಮಧ್ಯಾಹ್ನ 3ಗಂಟೆಗೆ ರಾಜಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಆದರೆ, ರಾಜ್ಯಪಾಲರು ಉಪಸ್ಥಿತರಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

" ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ " ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.

ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ. ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು.

Ads on article

Advertise in articles 1

advertising articles 2

Advertise under the article