ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

BIG BREAKING NEWS 😡ಹೋಟೆಲ್ ನಲ್ಲಿ ಭೀಕರ‌ ಅಗ್ನಿ ಅವಘಡ: ಓರ್ವ ಮೃತ್ಯು, ನಾಲ್ವರು ಗಂಭೀರ..!

BIG BREAKING NEWS 😡ಹೋಟೆಲ್ ನಲ್ಲಿ ಭೀಕರ‌ ಅಗ್ನಿ ಅವಘಡ: ಓರ್ವ ಮೃತ್ಯು, ನಾಲ್ವರು ಗಂಭೀರ..!

ಬೆಂಗಳೂರು: ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿ ರಾಜಕುಮಾರ್(45) ಎಂದು ತಿಳಿದು ಬಂದಿದೆ.

ನಾಗರಬಾವಿಯ ರಸ್ತೆಯ ಪಕ್ಕದ ಸರ್ವಿಸ್ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಹೋಟೆಲ್ ಸಿಬ್ಬಂದಿ ವಾಸವಿದ್ದ ಹೋಟೆಲ್ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ವ್ಯಾಪಿಸಿದೆ ಎಂದು‌ ತಿಳಿದು ಬಂದಿದೆ.
ದಟ್ಟ ಹೊಗೆಯಿಂದಾಗಿ ಐವರು ಸಿಬ್ಬಂದಿ ಅಸ್ವಸ್ಥಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article