ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

Karnataka ಹೊರಗುತ್ತಿಗೆ ನೌಕರನಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯ ಸಹೋದರಿ ಮೇಲೆ ಅತ್ಯಾಚಾರ..! ಆರೈಕೆಗೆ ಬಂದವಳಿಗೆ ನರಕಯಾತನೆ.

Karnataka ಹೊರಗುತ್ತಿಗೆ ನೌಕರನಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಯ ಸಹೋದರಿ ಮೇಲೆ ಅತ್ಯಾಚಾರ..! ಆರೈಕೆಗೆ ಬಂದವಳಿಗೆ ನರಕಯಾತನೆ.


ಬಾಗಲಕೋಟೆ:
ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಸಹೋದರಿ ಮೇಲೆ ಅತ್ಯಾಚಾರ!
ಬಾಗಲಕೋಟೆ: ಜನರ ಆರೋಗ್ಯ ಕಾಪಾಡಬೇಕಾದ ಆಸ್ಪತ್ರೆಯೇ ಮಹಿಳೆಯರಿಗೆ ಅಸುರಕ್ಷಿತ ತಾಣವಾಗುತ್ತಿರುವ ಆತಂಕಕಾರಿ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ 34 ವರ್ಷದ ಮಹಿಳೆ ಸಹೋದರನ ಆರೈಕೆಗೆ ಆಸ್ಪತ್ರೆಯಲ್ಲೇ ತಂಗಿದ್ದರು. ಇದೇ ವೇಳೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯ ಪರಿಚಂ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ.ಮೇ 4ರ ತಡರಾತ್ರಿ 12ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ, ಆಸ್ಪತ್ರೆಯಲ್ಲಿ ಜನ ಸಂಚಾರ ಕಡಿಮೆ ಇದ್ದ ಸಮಯವನ್ನು ಆರೋಪಿ ದುರುಪಯೋಗಪಡಿಸಿ
ಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

 ಕೃತ್ಯದ ಬಳಿಕ ಮಹಿಳೆ ಹೊರಬರದಂತೆ ಬಾಗಿಲು ಲಾಕ್ ಮಾಡಿ ಆರೋಪಿ ತನ್ನ ಕೆಲಸಕ್ಕೆ ತೆರಳಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಘಟನೆಯ ವಿಚಾರ ತಿಳಿದ ಕೂಡಲೇ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣದಿಂದಲೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ. ಆಸ್ಪತ್ರೆಯಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗುತ್ತಿರುವ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article