ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

kundapur ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ – 24 ಗಂಟೆಯೊಳಗೆ ಆರೋಪಿ ಬಂಧನ..

kundapur ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ – 24 ಗಂಟೆಯೊಳಗೆ ಆರೋಪಿ ಬಂಧನ..

ಕುಂದಾಪುರ: ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಸುಮಾರು ₹2.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 38/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 303(2) ಅನ್ವಯ ಪ್ರಕರಣ ದಾಖಲಿಸಲಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತಕ್ಷಣ ತನಿಖೆ ಕೈಗೊಂಡಿತು. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದಿದ್ದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಗಳ ವಿಶ್ಲೇಷಣೆಯ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು.

ಬಂಧಿತ ಆರೋಪಿಯನ್ನು ಹೇಮಂತ (40), ನರಸಿಂಹ ಶೆಟ್ಟಿ ಅವರ ಪುತ್ರ, ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಒಟ್ಟು ಸುಮಾರು ₹2.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article