ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

P B : ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ: ಶನಿವಾರ ಬೆಳಗ್ಗೆ 10 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ

P B : ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ: ಶನಿವಾರ ಬೆಳಗ್ಗೆ 10 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಕಾಲದ ನಂತರ ಮಹತ್ವದ ಬದಲಾವಣೆಯಾಗಿದೆ. ಶುಕ್ರವಾರ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದು, ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಕಲ್ಕತ್ತಾದ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಶಾಸಕರ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಈ ಘೋಷಣೆ ಮಾಡಿದರು. ಹೆಸರು ಘೋಷಣೆಯಾಗುತ್ತಿದ್ದಂತೆಯೇ ಅಮಿತ್ ಶಾ ಅವರು ವೇದಿಕೆಯ ಮೇಲೆ ಸುವೇಂದು ಅಧಿಕಾರಿ ಅವರಿಗೆ ಹಾರ ಹಾಕಿ, ಆಲಂಗಿಸಿಕೊಳ್ಳುವ ಮೂಲಕ ಶುಭ ಹಾರೈಸಿದರು.ಬಂಗಾಳದಲ್ಲಿ ಆಡಳಿತಾತ್ಮಕ ಸಮತೋಲನ ಕಾಯ್ದುಕೊಳ್ಳಲು ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಿಸಲು ಬಿಜೆಪಿ ನಿರ್ಧರಿಸಿದೆ. ಹಿರಿಯ ನಾಯಕಿ ರೂಪಾ ಗಂಗೂಲಿ ಅವರು ಉಪಮುಖ್ಯಮಂತ್ರಿಯಾಗಿ ದೃಢಪಟ್ಟಿದ್ದಾರೆ. ಎರಡನೇ ಉಪಮುಖ್ಯಮಂತ್ರಿ ಸ್ಥಾನವನ್ನು ಉತ್ತರ ಬಂಗಾಳ ಭಾಗದ ಪುರುಷ ಶಾಸಕರೊಬ್ಬರಿಗೆ ನೀಡಲಾಗುವುದು ಎಂದು ತಿಳಿದುಬಂದಿದೆ.ಸುವೇಂದು ಅಧಿಕಾರಿ ಅವರು ನಾಳೆ (ಶನಿವಾರ) ಬೆಳಗ್ಗೆ 10 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

Ads on article

Advertise in articles 1

advertising articles 2

Advertise under the article