Udupi: ಶಾಲಾ ಶಿಕ್ಷಣದ ಹೆಸರಿನಲ್ಲಿ ಡೊನೇಷನ್ ದಂಧೆ : ಕರವೇ ಜಿಲ್ಲಾಧ್ಯಕ್ಷ ಅ.ರಾ ಪ್ರಭಾಕರ್ ಪೂಜಾರಿ ಎಚ್ಚರಿಕೆ…!!
Sunday, May 17, 2026
ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಪ್ರಕಾರ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ. ಆದರೂ ಜಿಲ್ಲೆಯ ಹಲವು ಖಾಸಗಿ ಶಾಲೆಗಳು ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ದೇಣಿಗೆ ಪಡೆ ಯುತ್ತಿವೆ ಎಂದು ಆರೋಪಿಸಿದರು.
ಇದರಿಂದ ಬಡ, ರೈತ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಕೈಗೆಟುಕದಂತಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಅಲ್ಲದೆ, ಪಡೆಯುವ ದೇಣಿಗೆಗೆ ಯಾವುದೇ ಅಧಿಕೃತ ರಸೀದಿ ನೀಡದೆ ಕಪ್ಪು ಹಣದ ವ್ಯವಹಾರ ನಡೆಯು ತ್ತಿರುವುದು ಗಂಭೀರ ವಿಚಾರ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ – ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಶಾಲೆಗಳ ಬ್ಯಾಂಕ್ ಖಾತೆ ಪರಿಶೀಲನೆ ನಡೆಸಬೇಕು, ಪ್ರತಿ ಶಾಲೆಯ ಮುಂದೆ ದೂರು ಪೆಟ್ಟಿಗೆ ಅಳವಡಿಸಬೇಕು ಹಾಗೂ ಶಾಲೆಗಳ ಅಧಿಕೃತ ಶುಲ್ಕವನ್ನು ಸಾರ್ವ ಜನಿಕವಾಗಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ಒಂದು ವಾರದೊಳಗೆ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ ಶಾಲೆಗಳ ಎದುರು ಹಾಗೂ ಸಾರ್ವಜನಿಕ ಶೀಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸಿ ಬೀಗ ಜಡಿಯುವ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದಾರೆ.