karawara: ಕಾರವಾರ - ಕರ್ತವ್ಯದಲ್ಲಿದ್ದಾಗ ಕುಸಿದು ಬಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು.
Friday, June 19, 2026
ಕಾರವಾರ: ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೆಡ್ ಕಾನ್ಸೆಬಲ್ ಓರ್ವರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಶುಕ್ರವಾರ ಕಾರವಾರದಲ್ಲಿ ನಡೆದಿದೆ.
ಬೆಳಗಾವಿ ಮೂಲದ ಸುನೀಲ ಅಪ್ಪಣ್ಣ ಕೋಳಿ (46) ಮೃತಪಟ್ಟ ದುರ್ದೈವಿ.
ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ(Karwar DAR Office) ಕಚೇರಿಯಲ್ಲಿ ಎಂದಿನಂತೆ ತಮ್ಮ ಕರ್ತವ್ಯದಲ್ಲಿದ್ದಾಗ ಸುನಿಲ್ ಹಠಾತ್ತನೆ ಅಸ್ವಸ್ಥಗೊಂಡು ಕಚೇರಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ತಕ್ಷಣ ಅಲ್ಲಿದ್ದ ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮೊದಲೇ ಸುನೀಲ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪರೀಕ್ಷಿಸಿದ ವೈದ್ಯರು ಹೇಳಿದ್ದಾರೆ.