ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

kundapur ಹುಲಿಕಲ್  ಘಾಟ್ ರಸ್ತೆ ಮಧ್ಯೆ ಹೊತ್ತಿ ಉರಿದ ದುರ್ಗಾಂಬ ಖಾಸಗಿ ಬಸ್

kundapur ಹುಲಿಕಲ್ ಘಾಟ್ ರಸ್ತೆ ಮಧ್ಯೆ ಹೊತ್ತಿ ಉರಿದ ದುರ್ಗಾಂಬ ಖಾಸಗಿ ಬಸ್

ಕುಂದಾಪು: ಶಿವಮೊಗ್ಗದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಶ್ರೀ ದುರ್ಗಾಂಬ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ-ಉಡುಪಿ ಗಡಿಯ ಕುಂದಾಪುರ ತಾಲೂಕಿನ ಹುಲಿಕಲ್ ಘಾಟಿಯ ಬಾಳೆಬರೇ ಫಾಲ್ಸ್ ಸಮೀಪ ಶನಿವಾರ ಬೆಳಿಗ್ಗೆ ನಡೆದಿದೆ.
ರಸ್ತೆ ಮಧ್ಯೆ ಹೊತ್ತಿ ಉರಿದ ದುರ್ಗಾಂಬ ಬಸ್ ಎನ್ನಲಾಗಿದೆ

ಚಲಿಸುತ್ತಿದ್ದ ವೇಳೆ ಬಸ್‌ನಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅರಿತ ಚಾಲಕ ಮತ್ತು ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಬಸ್ ಬಹುತೇಕ ಸುಟ್ಟು ಕರಕಲಾಗಿದ್ದು, ವಾಹನಕ್ಕೆ ಭಾರೀ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದರೂ, ನಂತರ ಪರಿಸ್ಥಿತಿ ಸಹಜಗೊಂಡಿದೆ.

ಬೆಂಕಿಯ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಹೆಚ್ಚಿನ ತನಿಖೆ ಇನ್ನಷ್ಟೇ ತಿಳಿಯಬೇಕಾಗಿದೆ



Ads on article

Advertise in articles 1

advertising articles 2

Advertise under the article