kundapura ಕೋಟ : ಇಸ್ಪೀಟು ಜೂಜಾಟದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ…! 6 ಮಂದಿ ವಶ..!
Monday, June 8, 2026
ಕೋಟ: ಮೊಳಹಳ್ಳಿ ಗ್ರಾಮದ ಕೋಣಿಹರ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರವೀಣ ಕುಮಾರ್ ಆರ್. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಹಣವನ್ನು ಪಣವಾಗಿರಿಸಿಕೊಂಡು ಜೂಜಾಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಚಂದ್ರ ಮೊಗವೀರ, ಉಮೇಶ್, ಕೃಷ್ಣ, ರಘುರಾಮ ಶೆಟ್ಟಿ, ರಾಜು ಹಾಗೂ ಆನಂದ ಎಂದು ಗುರುತಿಸಲಾಗಿದೆ.
ಆರೋಪಿತರಿಂದ ಜೂಜಾಟಕ್ಕೆ ಬಳಸಲಾಗಿದ್ದ ₹7,900 ನಗದು, ಒಂದು ಪ್ಲಾಸ್ಟಿಕ್ ಚೀಲ ಹಾಗೂ ಇಸ್ಪೀಟು ಎಲೆಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.