ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

kundapura: ಗುಜ್ಜಾಡಿ ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ಗ್ರಾಮ ಸಭೆ ಯಶಸ್ವಿ

kundapura: ಗುಜ್ಜಾಡಿ ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ಗ್ರಾಮ ಸಭೆ ಯಶಸ್ವಿ


ಉಡುಪಿ ಜಿಲ್ಲೆ ಬೈಂದೂರಿ ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2026 ನೇ ಸಾಲಿನ ಮೊದಲ ಸುತ್ತಿನ ಮಹಿಳಾ ಗ್ರಾಮ ಸಭೆ  ಯಶಸ್ವಿ ಕಾರ್ಯಕ್ರಮ ಜರಗಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಜ್ಜಾಡಿ  ಗ್ರಾಮ ಪಂಚಾಯತ್ ಆಡಳಿತಅಧಿಕಾರಿಗಳು ವಹಿಸಿದ್ದರು 

 ಗ್ರಾಮ ಸಭೆಯಲ್ಲಿ ಪೊಲೀಸ್ ಇಲಾಖೆ 112 ತುರ್ತು ಸಹಾಯವಾಣಿ, ಸೈಬರ್ ಕ್ರೈಂ ಹಾಗೂ ಮಾದಕ ವ್ಯಸನ ನಿರ್ಮೂಲನೆ ಕುರಿತು ಜಾಗೃತಿ ಕಾರ್ಯಕ್ರಮ ಕೇಂದ್ರಬಿಂದುವಾಯಿತು.

ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ್ ಪಿ.ಎಂ. ಅವರು ಮಹಿಳೆಯರಿಗೆ 112 ತುರ್ತು ಸೇವೆಯ ಉಪಯೋಗ, ಸೈಬರ್ ಅಪರಾಧಗಳಿಂದ ರಕ್ಷಣೆ ಪಡೆಯುವ ವಿಧಾನಗಳು ಹಾಗೂ ಮಾದಕ ವ್ಯಸನ ತಡೆಗಟ್ಟುವಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಮಂಗಳವಾರ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ಇಲಾಖೆಗಳ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಅಗತ್ಯವಾದ ಮಾಹಿತಿಗಳನ್ನು ಹಂಚಿಕೊಂಡು ಮಹಿಳೆಯರಲ್ಲಿ ಜಾಗೃತಿ ಮೂಡಿಸಿದರು.

 ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಅಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.

ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್ ಬಳೆಗಾರ  ಕಾರ್ಯದರ್ಶಿ ಶಕುಂತಲಾ ಮಾಧವ ಕಾರ್ಯಕ್ರಮದ ನೇತೃತ್ವ ವಹಿಸಿದರು

Ads on article

Advertise in articles 1

advertising articles 2

Advertise under the article