udupi ಬೈಂದೂರು: ಕೊಡಪಾಡಿ ಕಿರು ಸೇತುವೆ ಬಿರುಕು..! ಆಡಳಿತಾಧಿಕಾರಿ ಸೋಮಪ್ಪ ಪರಿಶೀಲನೆ! ಹಿರಿಯ ಅಧಿಕಾರಿಗಳಿಗೆ ವರದಿ ರವಾನೆ.
Monday, June 22, 2026
ಕುಂದಾಪುರ : ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ತ್ರಾಸಿ -ಗಂಗೊಳ್ಳಿ ಸಂಪರ್ಕಿಸುವ ಮುಖ್ಯರಸ್ತೆ ಕೊಡಪಾಡಿ ಯಲ್ಲಿರುವ ಕಿರು ಸೇತುವೆ ದುಸ್ಥಿತಿಯ ಸಂಪೂರ್ಣ ವರದಿ COSTALNEWS ಮಾಧ್ಯಮದಲ್ಲಿ ವರದಿ ಬಿತ್ತರಿಸಿದ ಹಿನ್ನೆಲೆಯಲ್ಲಿ ಸೋಮವಾರ ಗುಜ್ಜಾಡಿ ಗ್ರಾಮದ ಆಡಳಿತಾಧಿಕಾರಿ ಸೋಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಹೌದು ತ್ರಾಸಿ - ಗಂಗೊಳ್ಳಿ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿರುವ ಕೊಡಪಾಡಿ ಕಿರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ತ್ರಾಸಿ -ಗಂಗೊಳ್ಳಿ ಈ ಪ್ರಮುಖ ಸಂಪರ್ಕ ಸೇತುವೆಯಲ್ಲಿ ಉಂಟಾಗಿರುವ ಬಿರುಕು ಕುರಿತು ಮಾಹಿತಿ ಪಡೆದ ಬಳಿಕ ಆಡಳಿತಾಧಿಕಾರಿ ಸೋಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ವೇಳೆ ಸೇತುವೆಯ ಸ್ಥಿತಿಗತಿಗಳನ್ನು ಅವಲೋಕಿಸಿದ ಅಧಿಕಾರಿಗಳು, ವರದಿಯನ್ನು ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿದಿನ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುವ ಈ ರಸ್ತೆಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಸುರಕ್ಷತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಳೆಗಾಲದ ಸಂದರ್ಭದಲ್ಲಿ ಸೇತುವೆಯ ದುರ್ಬಲ ಸ್ಥಿತಿ ಮತ್ತಷ್ಟು ಅಪಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಸೇತುವೆಯ ದುರಸ್ತಿ ಅಥವಾ ಪುನರ್ ನಿರ್ಮಾಣ ಕಾರ್ಯವನ್ನು ತಕ್ಷಣ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಸೇತುವೆಯ ತಾಂತ್ರಿಕ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಶೀಘ್ರ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವರದಿ: ಸತೀಶ್ ಕಂಚುಗೋಡು COSTALNEWS ಕುಂದಾಪುರ