ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

udupi ಬ್ರಹ್ಮಾವರ:   ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಬಾಲಕ ಮೃತ್ಯು..! ಪೋಷಕರೇ ಎಚ್ಚರ..!

udupi ಬ್ರಹ್ಮಾವರ: ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಬಾಲಕ ಮೃತ್ಯು..! ಪೋಷಕರೇ ಎಚ್ಚರ..!

ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ.
ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ.
ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.

ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗ ದಕ್ಷ್ನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್ನ ತಲೆಗೆ ಬಡಿದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರೂ, ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article