ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COASTAL NEWS | BIG BREAKING  ಕುಂದಾಪುರ: 66ರ ಮುಳ್ಳಿಕಟ್ಟೆ ಸರ್ಕಲ್ ಸಂಪೂರ್ಣ ಜಲಾವೃತ!  IRB ಇಲಾಖೆ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ – ನದಿಯಂತಾದ ರಸ್ತೆ.

COASTAL NEWS | BIG BREAKING ಕುಂದಾಪುರ: 66ರ ಮುಳ್ಳಿಕಟ್ಟೆ ಸರ್ಕಲ್ ಸಂಪೂರ್ಣ ಜಲಾವೃತ! IRB ಇಲಾಖೆ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ – ನದಿಯಂತಾದ ರಸ್ತೆ.

ಕುಂದಾಪುರ, ಜುಲೈ 24: ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ-66ರ ಮುಳ್ಳಿಕಟ್ಟೆ ಸರ್ಕಲ್ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಯ ಮೇಲೆ ಮಳೆ ನೀರು ನದಿಯಂತೆ ಹರಿಯುತ್ತಿರುವ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಮೂಡಿಸಿವೆ.
ಸ್ಥಳೀಯರು, IRB ಇಲಾಖೆಯ ಅವೈಜ್ಞಾನಿಕ ಕಾಮಗಾರಿ ಹಾಗೂ ಸಮರ್ಪಕ ನೀರು ಹರಿವಿನ ವ್ಯವಸ್ಥೆಯ ಕೊರತೆಯೇ ಈ ಸಮಸ್ಯೆಗೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಳೆ ಬಂದಾಗಲೆಲ್ಲ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ರಸ್ತೆ ಸುರಕ್ಷತೆಗೂ ಗಂಭೀರ ಅಪಾಯ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಜಲಾವೃತದಿಂದ , ದ್ವಿಚಕ್ರ ವಾಹನದ ಸವಾರರು ಹಾಗೂ ಪಾದಚಾರಿಗಳು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ.

 ತಕ್ಷಣವೇ ಶಾಶ್ವತ ಪರಿಹಾರ ಕೈಗೊಂಡು, ಮಳೆ ನೀರು ಸರಾಗವಾಗಿ ಹರಿಯುವಂತೆ ವೈಜ್ಞಾನಿಕ ಕಾಮಗಾರಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
"ಮಾನ್ಯ ಶಾಸಕರೆ, ಮಾನ್ಯ ಜಿಲ್ಲಾಧಿಕಾರಿಗಳೇ, ಜನಪ್ರತಿನಿಧಿಗಳೇ... ಎಲ್ಲಿದ್ದೀರಿ ಸ್ವಾಮಿ?" ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.


ವರದಿ: ಸುರೇಶ್ ಅಮಾಸ್ಯೆಬೈಲು COASTAL NEWS 

Ads on article

Advertise in articles 1

advertising articles 2

Advertise under the article