ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS /ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 7.34 ಲಕ್ಷ ರೂ. ಮೌಲ್ಯದ ಅಕ್ಕಿ ಹಾಗೂ ಲಾರಿ ವಶ..!

COSTALNEWS /ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 7.34 ಲಕ್ಷ ರೂ. ಮೌಲ್ಯದ ಅಕ್ಕಿ ಹಾಗೂ ಲಾರಿ ವಶ..!

ಬ್ರಹ್ಮಾವರ: ಮಣೂರು ಗ್ರಾಮದ ಮಹಾಲಕ್ಷ್ಮೀ ಹೋಟೆಲ್ ಎದುರು ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಆಹಾರ ನಿರೀಕ್ಷಕ ವಸಂತ ಕುಮಾರ್ ಅವರಿಗೆ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಆಹಾರ ಇಲಾಖೆ ಮತ್ತು ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆ ವೇಳೆ ಲಾರಿಯಲ್ಲಿ ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಯ 160 ಕ್ವಿಂಟಾಲ್ ಅಕ್ಕಿಯನ್ನು (320 ಪ್ಲಾಸ್ಟಿಕ್ ಚೀಲಗಳಲ್ಲಿ) ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಈ ಅಕ್ಕಿಯನ್ನು ಕುಮಟಾದ ನಾಡಮಸ್ಕಿರಿಯ ಶ್ರೀ ಗಣೇಶ್ ರೈಸ್ ಇಂಡಸ್ಟ್ರೀಸ್ ಮಾಲೀಕ ನಾಗರಾಜ್ ನಾಯ್ಕ್ ಅವರು ಲೋಡ್ ಮಾಡಿದ್ದು, ಕೇರಳದ ಕಾಸರಗೋಡಿನ ಶಾಜಿ ಟ್ರೇಡಿಂಗ್ ಕಂಪೆನಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. 

ಲಾರಿ ಮಾಲೀಕ ಗಿರೀಶ್ ನಾಯ್ಕ್ ಅವರ ಸೂಚನೆಯಂತೆ ಚಾಲಕ ಕೆ. ನರಸಿಂಹ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.
ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 3,84,000 ರೂ. ಹಾಗೂ ಲಾರಿಯ ಅಂದಾಜು ಮೌಲ್ಯ 3,50,000ರೂ. ಆಗಿದ್ದು, ಒಟ್ಟು 7,34,000ರೂ. ಮೌಲ್ಯದ ಸೊತ್ತನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ.
ಆಹಾರ ನಿರೀಕ್ಷಕ ವಸಂತ ಕುಮಾರ್ ಅವರ ದೂರಿನ ಮೇರೆಗೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಹಾಗೂ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿದ ದಂದೆಕೋರರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

Ads on article

Advertise in articles 1

advertising articles 2

Advertise under the article