ಕೋಸ್ಟಲ್ ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಸೇರಿ

COSTALNEWS | BIG BREAKINGಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರುತಿ ಕಾರು ಪಲ್ಟಿ..!ಪ್ರಾಣಾಪಾಯದಿಂದ ಮೂವರು ಪಾರು..!

COSTALNEWS | BIG BREAKINGಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರುತಿ ಕಾರು ಪಲ್ಟಿ..!ಪ್ರಾಣಾಪಾಯದಿಂದ ಮೂವರು ಪಾರು..!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ–ಅರಾಟೆ ಮಧ್ಯಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.
ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೊನ್ನಾವರದ ಕಡೆಗೆ ತೆರಳುತ್ತಿದ್ದ ಮಾರುತಿ ಆರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೃಹತ್ ಹೊಂಡಕ್ಕೆ ಜಾರಿ ಪಲ್ಟಿಯಾಗಿದೆ.
ಅಪಘಾತದ ವೇಳೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರು ಹೊನ್ನಾವರ ತಾಲೂಕಿನ ಮಂಕಿ–ಮುರ್ಡೇಶ್ವರ ರೈಲ್ವೆ ನಿಲ್ದಾಣ ಸಮೀಪದ ನಿವಾಸಿಗಳೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ವಿಮಾ (ಇನ್ಸೂರೆನ್ಸ್) ಪ್ರತಿನಿಧಿ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article